ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಷ್ಟ್ರಪತ ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದರು. ಆ ಅಧಿವೇಶನಕ್ಕೆ ಇದೀಗ 100 ವರ್ಷಗಳ ಸಂಭ್ರಮ. ಹೀಗಾಗಿ ಗಾಂಧಿ ಭಾರತ ಎನ್ನುವ ಕಾರ್ಯಕ್ರಮವನ್ನು ಕಾಂಗ್ರೆಸ್ ಆಯೋಜನೆ ಮಾಡಿದ್ದು, ಸುವರ್ಣಸೌಧ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡುತ್ತಿದ್ದು, ಅದಕ್ಕೆ ಕ್ಷಣಗಣನೆ ಶುರುವಾಗಿದೆ.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳು, ಶಾಸಕರು, ಮಾಜಿ ಶಾಸಕರು, ಮುಖಂಡರು, ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದಾರೆ.