ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಹಿನ್ನಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ ನಮನ ಸಲ್ಲಿಸಲಾಗಿದೆ. ರಾಷ್ಟ್ರ ರಾಜಧಾನಿಯ ರಾಜ್ ಘಾಟ್ ನಲ್ಲಿರುವ ಗಾಂಧಿ ಸ್ಮಾರಕ ಹಾಗೂ ವಿಜಯ್ ಘಾಟ್ ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸೂಚಿಸಿದರು.
ಈ ಇಬ್ಬರು ನಾಯಕರ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘ ಬರಹವನ್ನು ಪೋಸ್ಟ್ ಮಾಡುವ ಮೂಲಕ ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಸ್ಮರಿಸಲಾಗಿದೆ. ಸತ್ಯ, ಅಹಿಂಸೆ, ತ್ಯಾಗದ ಪ್ರತೀಕವಾಗಿರುವ ಗಾಂಧಿ, ಪ್ರಾಮಾಣಿಕತೆ, ಸರಳತೆಯ ಮೂರ್ತಿಯಾಗಿರುವ ಶಾಸ್ತ್ರಿಯವರು ಬದುಕು ಎಲ್ಲರಿಗೂ ಮಾದರಿ ಎಂದು ಹೇಳಿದ್ದಾರೆ.