ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನಕ್ಕೆ ನೂರು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಜೈ ಬಾಪು ಜೈ ಭೀಮ ಜೈ ಸಂವಿಧಾನ ಅಡಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಶತಮಾನೋತ್ಸವದ ನೆನಪಿಗಾಗಿ ಇಲ್ಲಿನ ಸುವರ್ಣಸೌಧ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರತಿಮೆ ಲೋಕಾರ್ಪಣೆಗೊಳಿಸಿದರು.
25 ಅಡಿ ಎತ್ತರದ ಕಂಚಿನ ಪುತ್ಥಳಿ ಎಲ್ಲರನ್ನು ಸೆಳೆಯುತ್ತಿದೆ. ಚರಕ ನೇಯುವ ಮೂಲಕ ಎಐಸಿಸಿ ಅಧ್ಯಕ್ಷರು ಮೂರ್ತಿ ಅನಾವರಣಗೊಳಿಸಿದರು. ಈ ವೇಳೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸಚಿವರು ಉಪಸ್ಥಿತರಿದ್ದರು.