Ad imageAd image

ಬೆಂಗಳೂರಲ್ಲಿ 1 ಕೋಟಿ ಮೌಲ್ಯದ ಗಾಂಜಾ ಜಪ್ತಿ

Nagesh Talawar
ಬೆಂಗಳೂರಲ್ಲಿ 1 ಕೋಟಿ ಮೌಲ್ಯದ ಗಾಂಜಾ ಜಪ್ತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಶಾಂತಿ ಎಕ್ಸ್ ಪ್ರೆಸ್ ಹಾಗೂ ಹಾತಿಯಾ ಎಕ್ಸ್ ಪ್ರೆಸ್ ಬೋಗಿಗಳ ಮೂಲಕ ಗಾಂಜಾ ತೆಗೆದುಕೊಂಡು ಬಂದಿದ್ದರು. ಈ ವೇಳೆ ರೈಲ್ವೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಒಡಿಶಾ, ತಮಿಳುನಾಡು, ಆಂಧ್ರಪ್ರದೇಶದಿಂದ ಗಾಂಜಾವನ್ನು ಬೆಂಗಳೂರು ತೆಗೆದುಕೊಂಡು ಬರುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ವಶ ಪಡಿಸಿಕೊಂಡು, 8 ಜನರನ್ನು ಬಂಧಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.

WhatsApp Group Join Now
Telegram Group Join Now
Share This Article