ಪ್ರಜಾಸ್ತ್ರ ಸುದ್ದಿ
ರಾಯಚೂರು(Raichoru): ಅಡುಗೆ ಸಿಲಿಂಡರ್ ಸ್ಫೋಟಗೊಂಡು ಐದು ಕುರಿಗಳು ಮೃತಪಟ್ಟಿದ್ದು, 40 ಸಾವಿರ ನಗದು, ಚಿನ್ನಾಭರಣ ಸುಟ್ಟು ಕರಕಲಾದ ಘಟನೆ ತಾಲೂಕಿನ ಏಗನೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಏಗನೂರು ಗ್ರಾಮದ ನರಸಿಂಹಲು ಎಂಬುವರ ಶೆಡ್ ನಲ್ಲಿದ್ದ ಗೃಹ ಬಳಕೆಯ ಸಿಲಿಂಡರ್ ಸೋರಿಕೆಯಾಗಿ ಈ ಅನಾಹುತ ನಡೆದಿದೆ. ಮನೆಯಲ್ಲಿದ್ದ ಪತಿ ಹಾಗೂ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆಯಲ್ಲಿದ್ದ ಚಿನ್ನಾಭರಣ, ದವಸ ಧಾನ್ಯಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳೀಯರು ಬೆಂಕಿ ನಂದಿಸುವ ಕೆಲಸ ಮಾಡಿದರು. ಆದರೆ, ಬೆಂಕಿ ನಿಯಂತ್ರಣಕ್ಕೆ ಬರದೆ ಇದ್ದಾಗ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದರು. ರಾಯಚೂರು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.