ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ತಮ್ಮ ವಿರುದ್ಧ ಅಕ್ರಮ ಭೂಮಿ ಖರೀದಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಾಯಕರ ವಿರುದ್ಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ರಾಜ್ಯ ವಿನಾಶದ ಅಂಚಿನಲ್ಲಿದೆ. ಮಹಮ್ಮದ್ ಘೋರಿ, ಮಹಮ್ಮದ್ ಘಜ್ನಿ, ಮಾಲಿಕ್ ಕಫೂರ್ ರಾಜ್ಯವನ್ನು ಆಳುತ್ತಿದ್ದಾರೆ. ಅವರು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತ್ತಿದ್ದಾರೆ.
ಈ ಸರ್ಕಾರದಲ್ಲಿ ಲೂಟಿ, ಅಕ್ರಮ, ದರೋಡೆ ಜೋರಾಗಿದೆ. ನಾನು 46 ಎಕರೆ ಭೂಮಿಯನ್ನು ನಲವತ್ತು ವರ್ಷಗಳ ಹಿಂದೆ ಖರೀದಿಸಿದ್ದೇನೆ. ರೈತನಂತೆ ಅದನ್ನು ಪ್ರಾಮಾಣಿಕವಾಗಿ ಬೆಳೆಸಿದ್ದೇನೆ. ಅತಿಕ್ರಮಣ ಮಾಡಿದ್ದರೆ ಕ್ರಮ ಕೈಗೊಳ್ಳಿ. ನನ್ನ ಹೆಸರಿಗೆ ಕಳಂಕ ತರಬೇಡಿ. ನಾನು ಕನಕಪುರದಲ್ಲಿ ಮಾತ್ರ ಬಂಡೆ ಒಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಳ್ಳಾರಿಗೂ ನನಗೂ ಏನ್ ಸಂಬಂಧ. ನನ್ನನ್ನು ಕೆಣಕಬೇಡಿ. ಟನ್ ಗಟ್ಟಲೆ ದಾಖಲೆಗಳಿವೆ. ಗಾಳಿಯಲ್ಲಿ ಗುಂಡು ಹೊಡೆಯುವುದಿಲ್ಲ. ಇರುವ ಸತ್ಯ ಹೇಳುತ್ತಿದ್ದೇನೆ.