ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಇಲ್ಲಿನ ಸುವರ್ಣಸೌಧದಲ್ಲಿ 2024ನೇ ಸಾಲಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಕೆಲವು ಫಲಾನುಭವಿಗಳನ್ನು ಬುಧವಾರ ಇಲ್ಲಿಗೆ ಕರೆದುಕೊಂಡು ಬರಲಾಗಿದೆ. ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಫಲಾನುಭವಿಗಳನ್ನು ಸುವರ್ಣಸೌಧಕ್ಕೆ ಕರೆದುಕೊಂಡು ಬಂದು ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಬೆಳಗಾವಿಯ ಗೃಹ ಕಚೇರಿಯಿಂದ ಸುವರ್ಣಸೌಧದ ತನಕ ಫಲಾನುಭವಿಗಳೊಂದಿಗೆ ಸಚಿವರು ಬಸ್ಸಿನಲ್ಲಿ ಬಂದರು. ನಂತರ ಆಡಳಿತ ಯಂತ್ರದ ಕುರಿತು ಅವರಿಗೆ ಪರಿಚಯ ಮಾಡಿಕೊಡಲಾಯಿತು. ಸದನದ ಚರ್ಚೆಯನ್ನು, ಸುವರ್ಣಸೌಧವನ್ನು ಟಿವಿಯಲ್ಲಿ ನೋಡುತ್ತಿದ್ದ ಮಹಿಳೆಯರು ಇಂದು ಇಲ್ಲಿಗೆ ಬಂದು ಖುಷಿ ಪಟ್ಟರು. ಸಚಿವರೊಂದಿಗೆ, ಅಧಿಕಾರಿಗಳೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಈ ಯೋಜನೆಯ ರೂವಾರಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.