ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ. 3ನೇ ದಿನದಾಟದಲ್ಲಿ ಭಾರತ 287 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿದೆ. ಇದರೊಂದಿಗೆ 515 ರನ್ ಗಳ ದೊಡ್ಡ ಟಾರ್ಗೆಟ್ ನೀಡಿದೆ. ಯುವ ಆಟಗಾರರಾದ ಶುಭನಂ ಗಿಲ್(Shubman Gill) 119, ರಿಷಬ್ ಪಂತ್(Rishabh Pant) 109 ರನ್ ಗಳ ಭರ್ಜರಿ ಆಟದಿಂದಾಗಿ ಬಾಂಗ್ಲಾ ಪಡೆಗೆ ದೊಡ್ಡ ಚಾಲೆಂಜ್ ನೀಡಿದಂತಾಗಿದೆ. 2ನೇ ಇನ್ನಿಂಗ್ಸ್ ನಲ್ಲಿಯೂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿಫಲರಾದರು. ಮೊದಲ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಗಳಿಸಿ ಜೈಸ್ವಾಲ್ 10 ರನ್ ಗಳಿಸಿ ಔಟ್ ಆದರು.
515 ರನ್ ಗಳ ಗುರಿ ಬೆನ್ನು ಹತ್ತಿರುವ ಬಾಂಗ್ಲಾ ಪಡೆ 20 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿದೆ. ಝಾಕಿರ್ ಹಸನ್ 33 ರನ್ ಗಳಿಸಿ ಔಟ್ ಆಗಿದ್ದಾರೆ. ಶದ್ಮಾನ್ ಇಸ್ಲಾಂ 33, ನಾಯಕ ಸ್ಯಾಂಟೋ 9 ರನ್ ಗಳೊಂದಿಗೆ ಆಟವಾಡುತ್ತಿದ್ದಾರೆ. ಬೂಮ್ರಾ 1 ವಿಕೆಟ್ ಪಡೆದಿದ್ದಾರೆ.