Ad imageAd image

ಖಾಸಗಿ ಬಸ್ ನಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ, ಬೆಳ್ಳಿ ಪತ್ತೆ

ಮುಂಬೈನಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಪತ್ತೆಯಾಗಿದೆ.

Nagesh Talawar
ಖಾಸಗಿ ಬಸ್ ನಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ, ಬೆಳ್ಳಿ ಪತ್ತೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಧಾರವಾಡ(Dharwad): ಮುಂಬೈನಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ(Gold and Silver) ಪತ್ತೆಯಾಗಿದೆ. ಧಾರವಾಡ ಹೊರವಲಯದ ನರೇಂದ್ರ ಟೋಲ್ ಹತ್ತಿರ ಗ್ರಾಮೀಣ ಠಾಣೆ ಪೊಲೀಸರು ವಿಆರ್ ಎಲ್(VRL Bus) ಬಸ್ ತಪಾಸಣೆ ನಡೆಸಿದಾಗ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಬಸ್ ಸಹ ಠಾಣೆಗೆ ತೆಗೆದುಕೊಂಡು ಬಂದಿದ್ದಾರೆ.

ಯಾವುದೇ ದಾಖಲೆ ಇಲ್ಲದೆ ಕೋಟ್ಯಾಂತರ ರೂಪಾಯಿಯ ಚಿನ್ನ, ಬೆಳ್ಳಿ ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಬಂದಿದೆ. ಹೀಗಾಗಿ ನರೇಂದ್ರ ಟೋಲ್ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನ, ಬೆಳ್ಳಿ ಪತ್ತೆಯಾಗಿದೆ. ಇದರ ಮೌಲ್ಯಮಾಪನ ನಡೆಸಲಾಗುತ್ತಿದೆ. ಇದು ಯಾರಿಗೆ ಸೇರಿದ್ದು, ಎಲ್ಲಿಗೆ ಸಾಗಾಟ ನಡೆಸಲಾಗುತ್ತಿತ್ತು. ಇದರ ಹಿಂದೆ ಯಾರಿದ್ದಾರೆ. ಖಾಸಗಿ ಬಸ್ಸಿನಲ್ಲಿ ಸಾಗಾಟ ನಡೆಸಿದ್ದು ಹೇಗೆ ಎನ್ನುವುದರ ತನಿಖೆ ನಡೆಸಲಾಗುತ್ತಿದೆ.

WhatsApp Group Join Now
Telegram Group Join Now
Share This Article