ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಬರೋಬ್ಬರಿ 8 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಪಡೆದು ವಂಚನೆ ಮಾಡಿರುವ ಪ್ರಕರಣ ಸಂಬಂಧ ಐಶ್ವರ್ಯಗೌಡ ಹಾಗೂ ಪತಿ ಹರೀಶಗೌಡ ಎಂಬುವರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ನಟ ಧರ್ಮೇಂದ್ರ ಹೆಸರು ಕೇಳಿ ಬಂದಿದ್ದು, ಇವರನ್ನು ವಿಚಾರಣೆಗೆ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ.
ವಾರಾಹಿ ಜ್ಯುವೆಲರ್ಸ್ ನಲ್ಲಿ ಆರೋಪಿಗಳು 14 ಕೆಜಿ 600 ಗ್ರಾಂ ಚಿನ್ನಾಭರಣ ಪಡೆದಿದ್ದಾರೆ ಎಂದು ಮಾಲೀಕಿ ವನಿತಾ ಐತಾಳ್ ದೂರು ದಾಖಲಿಸಿದ್ದಾರೆ. ಈ ಸಂಬಂಧ ಇವರನ್ನು ವಿಚಾರಣೆ ನಡೆಸಲಾಗಿದೆ. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಿದ್ದೇನೆ ಎಂದಿದ್ದಾರೆ. ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ 4ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ. ವಿಚಾರಣೆಗೆ ಕಸ್ಟಡಿಗೆ ಪಡೆಯಲು ರಿಮಾಂಡ್ ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.