ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ನಿವೃತ್ತಿ ಘೋಷಿಸಿದ್ದಾರೆ. ದೀರ್ಘಕಾಲದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಆಟದಿಂದ ದೂರ ಉಳಿದಿದ್ದರು. 2023ರಲ್ಲಿ ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಡಿದ್ದು ಕೊನೆಯದು.
ನಿವೃತ್ತಿ ಘೋಷಿಸುವುದನ್ನು ಅಷ್ಟೊಂದು ದೊಡ್ಡ ವಿಷಯ ಎಂದು ನಾನು ಅಂದುಕೊಂಡಿಲ್ಲ. ನನ್ನ ಮೊಣಕಾಲುಗಳು ನನ್ನ ಆಟಕ್ಕೆ ಸ್ಪಂದಿಸುತ್ತಿಲ್ಲ. ಇನ್ಮುಂದೆ ಆಡಲು ಸಾಧ್ಯವಿಲ್ಲ ಅನ್ನೋದನ್ನು ಅರಿತಿದ್ದೇನೆ. ವಿಶ್ವದ ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರ್ತಿಯಾಗಬೇಕು ಎಂದರೆ 8-9 ಗಂಟೆಗಳ ತರಬೇತಿ ಪಡೆಯಬೇಕು. ಆದ್ರೆ, ನನ್ನ ಮೊಣಕಾಲುಗಳು 1-2 ಗಂಟೆಗಳಲ್ಲಿ ಶಕ್ತಿ ಕಳೆದುಕೊಳ್ಳುತ್ತಿವೆ. ಹೀಗಾಗಿ ಆಟ ನಿಲ್ಲಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
2012ರ ಲಂಡನ್ ಒಲಿಂಪಿಕ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 2017ರ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಕಂಚು, 2018ರ ಕಾಮನ್ ವೆಲ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದಾರೆ. 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಸೈನಾ ನೆಹ್ವಾಲ್ ಮೊಣಕಾಲಿನ ಗಾಯಕ್ಕೆ ಒಳಗಾದರು. ಇದು ಅವರ ಆಟದ ಮೇಲೆ ಸಾಕಷ್ಟು ಪರಿಣಾಮ ಬೀರಿತು. 35 ವರ್ಷದ ಆಟಗಾರ್ತಿ ಇದೀಗ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.




