ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ಗೊ.ರು ಚನ್ನಬಸಪ್ಪ ಅವರು ಆಯ್ಕೆ ಆಗಿದ್ದಾರೆ. ಡಿಸೆಂಬರ್ 20, 21 ಹಾಗೂ 22ರಂದು ಮೂರು ದಿನಗಳ ಮಂಡ್ಯದಲ್ಲಿ ಸಮ್ಮೇಳನ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ ನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಈ ಕುರಿತು ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಎಲ್ಲ ರೀತಿಯಿಂದ ಚರ್ಚೆ ನಡೆಸಿ, ಸರ್ವಾನುಮತದಿಂದ ಗೊ.ರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.