ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 77ನೇ ಗಣರಾಜ್ಯೋತ್ಸವವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಧಜ್ವಾರೋಹಣ ಮಾಡುವ ಮೂಲಕ ಆಚರಿಸಲಾಯಿತು. ಇದೆ ವೇಳೆ ರಾಜ್ಯ ಸರ್ಕಾರ ಸಿದ್ಧಪಡಿಸಿಕೊಟ್ಟ 24 ಪುಟಗಳ ಸುದೀರ್ಘ ಭಾಷಣವನ್ನು ಮಾಡಿದರು.
ರಾಜಪ್ರಭುತ್ವ ಹಾಗೂ 17ನೇ ಶತಮಾನದಿಂದ ಅಸ್ತಿತ್ವದಲ್ಲಿದ್ದ ವಸಾಹತುಶಾಹಿ ಆಡಳಿತವನ್ನು ಕೊನೆಗೊಳಿಸಿ ಪ್ರಜಾಪ್ರಭುತ್ವ ಸ್ಥಾಪಿಸಿದ ದಿನ. ಸಾಮಾಜಿಕ, ಆರ್ಥಿಕ, ರಾಜಕೀಯ, ನ್ಯಾಯದ ವಿಚಾರದಲ್ಲಿ ಎಲ್ಲರೂ ಸಮಾನರು. ಪ್ರಜಾಪ್ರಭುತ್ವ ಸ್ಥಾಪನೆಗಾಗಿ ಅಸಂಖ್ಯಾತ ಜನರು ತ್ಯಾಗ, ಬಲಿದಾನ ಮಾಡಿದ್ದಾರೆ ಅಂತಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಅಂಬೇಡ್ಕರ್ ಅವರು ಸ್ವಾತಂತ್ರ್ಯವನ್ನು ರಾಜಕೀಯ, ಆರ್ಥಿ, ಸಾಮಾಜಿಕ ಸ್ವಾತಂತ್ರ್ಯವೆಂದು ಮೂರು ಮಾದರಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಸಂವಿಧಾನದ ಆಶಯದಂತೆ ರಾಜ್ಯ ಸರ್ಕಾರ ಹಿಂದುಳಿದ ಜನರಿಗೆ ಆರ್ಥಿಕ ಶಕ್ತಿ ತುಂಬಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವರ್ಷಕ್ಕೆ 1.12 ಲಕ್ಷ ಕೋಟಿ ರೂಪಾಯಿಯನ್ನು ಜನ ಕಲ್ಯಾಣಕ್ಕಾಗಿ ಖರ್ಚು ಮಾಡುತ್ತಿದೆ. ಗ್ಯಾರೆಂಟಿ ಯೋಜನೆಗಳಿಗಾಗಿ 1.13 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಬಳಸಿದೆ ಎಂದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತಿರಿದ್ದರು.




