Ad imageAd image

ಮೈಕ್ರೋ ಫೈನಾನ್ಸ್ ಕಾನೂನು ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

Nagesh Talawar
ಮೈಕ್ರೋ ಫೈನಾನ್ಸ್ ಕಾನೂನು ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅನೇಕರು ಊರು ಬಿಟ್ಟು ಹೋಗುತ್ತಿದ್ದಾರೆ. ಪೊಲೀಸ್ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ರೂಪಿಸಲಾದ ಸುಗ್ರೀವಾಜ್ಞೆಗೆ ಇದೀಗ ರಾಜ್ಯಪಾಲರ ಅಂಕಿತ ಬಿದ್ದಿದೆ. ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ. ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್ ಗಳ ನಿಯಮ ಬಾಹಿರ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article