ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ ನಡೆಯಲಿದ್ದು, ಮತದಾನ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ. ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿಯ ಅರಳದಿನ್ನಿ ಹಾಗೂ ಚಿಮ್ಮಲಗಿ ಗ್ರಾಮ ಪಂಚಾಯತಿಯ ಚಿಮ್ಮಲಗಿ, ಇಂಡಿ ತಾಲೂಕಿನ ಸಾಲೋಟಗಿ ಹಾಗೂ ಖೇಡಗಿ ಗ್ರಾಮ ಪಂಚಾಯತ್, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮ ಪಂಚಾಯಿತಿಯ ನಾಗರಾಳ ಹುಲಿ, ಮುತ್ತಗಿ ಹಾಗೂ ಬ್ಯಾಕೋಡ ಗ್ರಾಮ ಪಂಚಾಯತಿಯ ಜಯವಾಡಗಿಗೆ ಉಪ ಚುನಾವಣೆ ನಡೆಯಲಿದೆ.
ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮ ಪಂಚಾಯತಿಯ ಕಾತ್ರಾಳ, ವಿಜಯಪುರ ತಾಲೂಕಿನ ಕನ್ನೂರ, ನಾಗಠಾಣ, ಜುಮನಾಳ ಹಾಗೂ ಹೊನಗನಹಳ್ಳಿ ಗ್ರಾಮ ಪಂಚಾಯತಿಗೆ, ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯತಿಗೆ, ತಾಳಿಕೋಟೆ ತಾಲೂಕಿನ ಹಿರೂರ ಗ್ರಾಮ ಪಂಚಾಯತಿಯ ತಮದಡ್ಡಿ, ಚಡಚಣ ತಾಲೂಕಿನ ಲೋಣಿ ಬಿ.ಕೆ ಮತ್ತು ಚಡಚಣ ತಾಲೂಕಿನ ಹತ್ತಳ್ಳಿ ವ್ಯಾಪ್ತಿಯಲ್ಲಿ 2024 ನವೆಂಬರ್ 23ರಂದು ಮತದಾನ ನಡೆಯಲಿದೆ. ನವೆಂಬರ್ 21ರ ಸಂಜೆ 5 ಗಂಟೆಯಿಂದ 24ರ ಸಂಜೆ 5 ಗಂಟೆಯವರೆಗೆ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಶೇಖರಣೆ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.