Ad imageAd image

ಆಸ್ಪತ್ರೆಯಲ್ಲಿ ಗೃಹಲಕ್ಷ್ಮಿಯರ ಜೀವಹರಣ: ಕುಮಾರಸ್ವಾಮಿ

ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Nagesh Talawar
ಆಸ್ಪತ್ರೆಯಲ್ಲಿ ಗೃಹಲಕ್ಷ್ಮಿಯರ ಜೀವಹರಣ: ಕುಮಾರಸ್ವಾಮಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ. ಸ್ವತಃ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ ಎಂದಿದ್ದಾರೆ.

ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರ್ಕಾರ ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮಿಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರ್ಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ. ಇದೇನಾ ಮಹಿಳಯರ ಸಬಲೀಕರಣ ಎಂದು ಪ್ರಶ್ನಿಸಿದ್ದಾರೆ.

ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ . ಪಲಾಯನಕ್ಕಿಂತ ಪ್ರಾಯಶ್ಚಿತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮಿಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ. ಈ ಮರಣಗಳಿಂದ ಸರ್ಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Share This Article