ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಾಕಷ್ಟು ಗದ್ದಲದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ಮಸೂದೆ-2025ಕ್ಕೆ ಅಂಗೀಕಾರ ಸಿಕ್ಕಿದೆ. ಗೃಹ ಸಚಿವ ಜಿ.ಪರಮೇಶ್ವರ್ ಮಂಡಿಸಿದ ಈ ಮಸೂದೆಗೆ ಸಾಕಷ್ಟು ವಿಪಕ್ಷಗಳಿಂದ ವಿರೋಧ ಕೇಳಿ ಬಂದಿತು. ಗಲಾಟೆ ಮಾಡಿದರು. ಇದರ ನಡುವೆಯೂ ಅಂಗೀಕಾರ ಪಡೆಯಿತು.
ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ ಮಾತನಾಡುತ್ತಿದ್ದಾಗ ಸಚಿವ ಬೈರತಿ ಸುರೇಶ್ ಮಾತನಾಡಿ, ಕರಾವಳಿಗೆ ಬೆಂಕಿ ಹಚ್ಚಿದ್ದೀರಿ, ಇಲ್ಲಿಯೂ ಬೆಂಕಿ ಹಚ್ಚುತ್ತಿದ್ದೀರ ಎಂದು ಹೇಳಿದಾಗ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ಸುರೇಶ್ ಮಾತನ್ನು ಕಡತದಿಂದ ತೆಗೆದು ಹಾಕಬೇಕು ಎಂದು ಪಟ್ಟು ಹಿಡಿದರು. ಆರ್.ಅಶೋಕ್ ಮಸೂದೆ ಪ್ರತಿಯನ್ನು ಹರಿದು ಹಾಕಿದರು. ಇದೆಲ್ಲದರ ನಡುವೆ ಗೃಹ ಸಚಿವ ಜಿ.ಪರಮೇಶ್ವರ್ ಸದನದ ಅನುಮೋದನೆ ಪಡೆದರು.




