ಪ್ರಜಾಸ್ತ್ರ ಸುದ್ದಿ
ಹಾವೇರಿ(Haveri): ಕೇಂದ್ರ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತೆ ಇರುವ ಎರಡು ಕಟ್ಟಡಗಳಲ್ಲಿ ಸೋಮವಾರ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಗಡ ನಡೆದಿರಬಹುದು ಎಂದು ಶಂಕಿಸಲಾಗಿದೆ. ಗೃಹ ಬಳಕೆಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಸಾಕಷ್ಟು ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಆಗಿಲ್ಲ.
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಕಟ್ಟಡ ಇದಾಗಿದೆ. ಇಲ್ಲಿ ಹೋಟೆಲ್, ಬೇಕರಿ ಸೇರಿ ಇತರೆ ಮಳಿಗೆಗಳು ಇದ್ದು, ಎರಡು ಅಂಗಡಿಗಳನ್ನು ಬಾಡಿಗೆಗೆ ನೀಡಲಾಗಿತ್ತು. ನೋಡು ನೋಡುತ್ತಿದ್ದಂತೆ ಬೆಂಕಿ ಆವರಿಸಿಕೊಂಡಿದೆ. ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಂಗಡಿ ಬಾಡಿಗೆದಾರರಿಂದ ಮಾಹಿತಿ ಪಡೆದಿದ್ದು, ತನಿಖೆಯಿಂದ ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬರಲಿದೆ.