ಪ್ರಜಾಸ್ತ್ರ ಸುದ್ದಿ
ಹಾವೇರಿ(Haveri): ನಗರಸಭೆ ಮುಂದೆ ಪ್ರತಿಷ್ಠಾಪಿಸಲಾಗಿದ್ದ ಮಹಾತ್ಮ ಗಾಂಧಿ ಪ್ರತಿಮೆಯನ್ನು ಭಾನುವಾರ ರಾತ್ರಿ ಧ್ವಂಸಗೊಳಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ವೈಭವ ವಿನೋದ ರಾಯ್ಕರ(28) ಬಂಧಿತ ಆರೋಪಿಯಾಗಿದ್ದಾನೆ. ನಗರಸಭೆ ಪೌರಾಯುಕ್ತ ಎಚ್.ಕಾಂತರಾಜು ಅವರು ನೀಡಿದ ದೂರಿನ ಹಿನ್ನಲೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಿಡಿಗೇಡಿ ಆರೋಪಿ ವೈಭವ ಪ್ರತಿಮೆಗೆ ಇಟ್ಟಿಗೆಯಿಂದ ಹೊಡೆದು ಹಾನಿ ಮಾಡಿದ್ದಾನೆ. ಸಿಸಿಟಿವಿ ದೃಶ್ಯಗಳು ಹಾಗೂ ಸಿಕ್ಕ ಸಾಕ್ಷಿಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಯಶೋಧಾ ವಂಟಗೋಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದ್ದು, ಪ್ರಕರಣ ಮುಚ್ಚಿ ಹಾಕುವ ಯತ್ನವೇ ಅನ್ನೋ ಅನುಮಾನ ಮೂಡಿದೆ.




