ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಇದೀಗ ಈ ಮೂವರು ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ರಾಜಕೀಯ ಉದ್ದೇಶದಿಂದ ಹಾಗೂ ದುರುಪಯೋಗದಿಂದ ದೂರು ದಾಖಲಿಸಲಾಗಿದೆ. ಇದನ್ನು ರದ್ದುಗೊಳಿಸಬೇಕೆಂದು ಕೋರಿಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಕುಮಾರಸ್ವಾಮಿ ತಮಗೆ ಬೆದರಿಕೆ ಹಾಕಿದ್ದಾರೆ. ಸರ್ಕಾರ ನೌಕರನಿಗೆ ಕರ್ತವ್ಯ ನಿರ್ವಹಿಸದಂತೆ ಹೆದರಿಸಿದ್ದಾರೆ ಎಂದು ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ಸಲ್ಲಿಸಿದ್ದಾರೆ.