ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಯುವತಿಯೊಂದಿಗೆ ಸಹ ಜೀವನ ನಡೆಸುತ್ತಿದ್ದ ಯುವಕನೊಬ್ಬ ತನ್ನ ಶೋಕಿಗಾಗಿ ಕಳ್ಳತನಕ್ಕೆ ಇಳಿದಿದ್ದು, ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಫಜಲಪುರದ ಕಲ್ಲಪ್ಪ ಅಲಿಯಾಸ್ ಸಂಜು ಪೂಜಾರಿ(24) ಬಂಧಿತ ಆರೋಪಿಯಾಗಿದ್ದಾನೆ. ಕೂಲಿ ಕೆಲಸ ಮಾಡುತ್ತಿದ್ದ ಈತ ಯುವತಿಯೊಂದಿಗೆ ಲಿವಿಂಗ್ ಟುಗೆದರ್ ಜೀವನ ಮಾಡುತ್ತಿದ್ದ.
ತನ್ನ ಖರ್ಚು, ಮನೆಯ ಖರ್ಚು ನಿಭಾಯಿಸಲು ಕಳ್ಳತನಕ್ಕೆ ಇಳಿದಿದ್ದಾನೆ. ಪರ್ಸ್ ಕದಿಯುತ್ತಿದ್ದ ಇವನ ಶೋಕಿ ಹೆಚ್ಚಾದಾಗ ಮನೆಗಳ ಕಳ್ಳತನ ಶುರು ಮಾಡಿದ್ದಾನೆ. ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದಾಗ, ಯುವತಿಯೊಂದಿಗೆ ಸಹಜೀವನ ನಡೆಸುತ್ತಿದ್ದು, ಶೋಕಿಗಾಗಿ ಹಣ ಸಾಕಾಗದೆ ಇದ್ದಾಗ ಕಳ್ಳತನ ಮಾಡಲು ಶುರು ಮಾಡಿದ ಎಂದು ಹೇಳಿದ್ದಾನಂತೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.




