ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬಿಹಾರ್ ವಿಧಾನಸಭೆ ಚುನಾವಣೆ-2025ಕ್ಕೆ ಸಂಬಂಧಿಸಿದಂತೆ ಕರ್ತವ್ಯಕ್ಕೆ ಹೋಗಿದ್ದ ವಿಜಯಪುರ ಐಆರ್ ಬಿ ಹೆಡ್ ಕಾನ್ಸ್ಟೇಬಲ್ ರಾಜು ವಾಲಿಕಾರ(36) ಸೋಮವಾರ ನಿಧನರಾಗಿದ್ದಾರೆ. ಚುನಾವಣೆ ಕರ್ತವ್ಯದ ಸಂದರ್ಭದಲ್ಲಿ ಹೃದಯಾಘಾತವಾಗಿ ನವೆಂಬರ್ 10, 2025 ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಇಂಡಿ ತಾಲೂಕಿನ ಬೂದಿಹಾಳ ಗ್ರಾಮದವರಾಗಿದ್ದಾರೆ. 2014ರಲ್ಲಿ ಐಆರ್ ಬಿಗೆ ನೇಮಕವಾಗಿದ್ದು, ಮೊದಲು ವಿಜಯಪುರದಲ್ಲಿ ಸೇವೆ ಸಲ್ಲಿಸಿದ್ದಾರೆ. ನಂತರ ಕೆಲ ವರ್ಷ ತುಮಕೂರಿನಲ್ಲಿ ಕೆಲಸ ಮಾಡಿದ್ದರು. ಪ್ರಸ್ತುತ ವಿಜಯಪುರ ಐಆರ್ ಬಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯದಲ್ಲಿರುವಾಗ ಮೃತಪಟ್ಟಿರುವುದರಿಂದ ಸರ್ಕಾರ ಇವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ.




