ಸಿಂದಗಿಯಲ್ಲಿ ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು

136

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನಾದ್ಯಂತ ಭಾನುವಾರ ರಾತ್ರಿ ಭರ್ಜರಿ ಮಳೆಯಾಗಿದೆ. ಹೊಲಗಳಲ್ಲಿ ನೀರು ಹರಿದಿದೆ. ಕೆಲವು ಕಡೆ ಒಡ್ಡು ಒಡೆದು ಹೋಗಿವೆ. ಅಷ್ಟರ ಮಟ್ಟಿಗೆ ಮಳೆ ಸುರಿದಿದೆ.

ಇನ್ನು ತಾಲೂಕಿನ ಹಲವು ಗ್ರಾಮಗಳಲ್ಲಿ ಮನೆಯೊಳಗೆ ನೀರು ನುಗ್ಗಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ತಾಲ್ಲೂಕಿನ ಬೋರಗಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಬಸ್ ನಿಲ್ದಾಣದ ಹತ್ತಿರದ ಮನೆಗಳಲ್ಲಿ ನೀರು ನುಗ್ಗಿವೆ. ಇದರಿಂದಾಗಿ ಜೋಳ, ಗೋಧಿ ಸೇರಿ ಅಪಾರ ಪ್ರಮಾಣದ ವಸ್ತುಗಳು ಹಾಳಾಗಿವೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.




error: Content is protected !!