ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಅನೇಕ ಕಡೆ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಹಾರಾಷ್ಟ್ರದ ಉಜ್ಜಯಿನಿ ಬ್ಯಾರೇಜ್ ನಿಂದ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ಭೀಮಾ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಯ ಅನೇಕ ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ.
ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಡ್ಯಾಂ ಸಂಪೂರ್ಣ ತುಂಬಿದೆ. ಇನ್ನು ಜೇವರ್ಗಿ ತಾಲೂಕಿನ ಸನ್ನತಿ ಸೇತುವೆ ಸಹ ಮುಳುಗಡೆಯಾಗಿದೆ. ಚಂದ್ರಂಪಳ್ಳಿ ಡ್ಯಾಂನಿಂದ ನೀರು ಹೊರ ಬಿಟ್ಟಿರುವುದರಿಂದ ಮೂರು ಜಾನುವಾರುಗಳು ಕೊಚ್ಚಿಕೊಂಡು ಹೋಗಿರುವ ದೃಶ್ಯ ಕಂಡು ಬಂದಿದೆ. ಜನರ ಜೀವನ ಪರಿಸ್ಥಿತಿ ಸಂಪೂರ್ಣ ಹಾಳಾಗಿದ್ದು, ನಿರಾಶ್ರಿತ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ.