ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದೇ ರೀತಿ ರಾಜಧಾನಿ ಬೆಂಗಳೂರಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ಹಲವು ಕಡೆ ನೀರು ಮನೆ, ಅಂಗಡಿಗಳಿಗೆ ನುಗ್ಗಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸೋಮವಾರ ಹಾಗೂ ಮಂಗಳವಾರವೂ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಐಎಂಡಿ ಪ್ರಕಾರ ಬೆಂಗಳೂರಲ್ಲಿ 24 ಗಂಟೆಯಲ್ಲಿ 103 ಮಿಲಿ ಮೀಟರ್ ಮಳೆಯಾಗಿದೆ.
ಈಗಾಗ್ಲೇ ಹಲವು ಕಡೆ ಮರಗಳು ಧರೆಗುರುಳಿವೆ. ವಿದ್ಯುತ್ ಸಮಸ್ಯೆಯಾಗಿದೆ. ಸಂಚಾರ ದಟ್ಟಣೆ ಕಂಡು ಬರುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬೆಂಗಳೂರು ಮಾತ್ರವಲ್ಲ ರಾಜ್ಯದ 23 ಜಿಲ್ಲೆಗಳಲ್ಲಿ ಗುರುವಾರದ ತನಕ ಮಳೆಯಗಾಲಿದೆಯಂತೆ. ಚಂಡಮಾರುತ ಇಂದು ಬೆಳಗ್ಗೆ ಆಗ್ನೇಯ ಬಂಗಾಳ ಕೊಲ್ಲಿ, ಆಂಧ್ರ, ತಮಿಳುನಾಡು, ತೆಲಂಗಾಣದಿಂದ ಉತ್ತರ ತಮಿಳುನಾಡಿನ ತನಕ ಬಂದಿದೆಯಂತೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.