ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಗೃಹ ಲಕ್ಷ್ಮಿ ಯೋಜನೆಯ ಹಣ ಇತ್ತೀಚೆಗೆ ವಿಳಂಬವಾಗುತ್ತಿದೆ. ಇದನ್ನು ವಿಪಕ್ಷಗಳು ಸಹ ಖಂಡಿಸುತ್ತಿವೆ. ಎರಡು, ಮೂರು ತಿಂಗಳಿಗೊಮ್ಮೆ ಹಣ ಬಿಡುಗಡೆಯಾಗುತ್ತಿದ್ದು, ಎಲ್ಲರ ಆಕ್ರೋಶಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಗುರಿಯಾಗುತ್ತಿದೆ. ಈ ಬಗ್ಗೆ ಭಾನುವಾರ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾರ್ಚ್ 31ರ ಬಳಿಕ 2 ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.
ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಸೋಮವಾರ ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾಡಲಾಗುತ್ತಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಮಾರು 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಮಾಡಲಾಗುತ್ತಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದೆ. ಇದೆ ವೇಳೆ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಅವರಿಗೆ ಗೌರವ, 100 ಅಂಗವಿಕಲರಿಗೆ ಬೈಕ್, ಅಂಧ ಮಕ್ಕಳಿಗೆ ಬ್ರೈನ್ ಲ್ಯಾಪ್ ಟಾಪ್ ಕೊಡುವ ಕಾರ್ಯಕ್ರಮ ಸಹ ಆಯೋಜಿಸಲಾಗಿದೆ ಎಂದರು.
ನಮ್ಮ ಸರ್ಕಾರವಿದ್ದಾಗ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ರೂಪಾಯಿ ಹೆಚ್ಚಿಸಲಾಗಿತ್ತು. ನಂತರ ಯಾವುದೇ ಸರ್ಕಾರ ಹೆಚ್ಚಿಸಲಿಲ್ಲ. ಈಗ ಬಜೆಟ್ ನಲ್ಲಿ ಕಾರ್ಯಕರ್ತೆಯರಿಗೆ 1 ಸಾವಿರ, ಸಹಾಯಕಿಯರಿಗೆ 750 ರೂಪಾಯಿ ಘೋಷಿಸಿದ್ದು, ಜಾರಿಗೆ ತರುತ್ತೇವೆ ಎಂದು ಹೇಳಿದರು.