ಪ್ರಜಾಸ್ತ್ರ ಸುದ್ದಿ
ತಿರುವನಂತಪುರಂ(thiruvananthapuram): ಕೇರಳ ಸಿನಿಮಾ ರಂಗದಲ್ಲಿ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ. ಕೆಲ ನಿರ್ಮಾಪಕ, ನಿರ್ದೇಶಕ, ನಟರ ವಿರುದ್ಧ ನಟಿಯರು ಆರೋಪಿಸಿದ್ದಾರೆ. ಅಲ್ಲದೆ ನ್ಯಾಯಮೂರ್ತಿ ಹೇಮಾ ವರದಿಯಲ್ಲಿ ಕೆಲವೊಂದು ಗಂಭೀರ ವಿಷಯಗಳು ಬಯಲಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಮಲಯಾಳಂ ಸಿನಿಮಾ ಕಲಾವಿದರ ಸಂಘದ ಅಧ್ಯಕ್ಷ, ನಟ ಮೋಹನ್ ಲಾಲ್(mohan lal) ಸೇರಿದಂತೆ ಎಲ್ಲ 17 ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ.
ನಟಿಯರ ಮೇಲಿನ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಾಗಿದೆ. ಸಾಮಾನ್ಯ ಸಭೆಯ ಬಳಿಕ ಎರಡು ತಿಂಗಳೊಳಗಾಗಿ ನೂತನ ಆಡಳಿತ ಮಂಡಳಿ ರಚನೆಯಾಗಲಿದೆ ಎಂದು ತಿಳಿಸಲಾಗಿದೆ. ಈ ಪ್ರಕರಣ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸರ್ಕಾರ 7 ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ಐಟಿ ಸಹ ರಚನೆ ಮಾಡಿದೆ.