ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗರಂ ಆಗಿದೆ ಎಂದು ಹೇಳಲಾಗುತ್ತಿದೆ. ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಕೆಲವರು ರಾಜೀನಾಮೆ ನೀಡುತ್ತೇವೆ ಎನ್ನುತ್ತಿದ್ದಾರೆ. ಇದರಿಂದಾಗಿ ಪಕ್ಷಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇದೇ ರೀತಿಯಾದರೆ ಮುಂದೆ ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರೊಂದಿಗಿನ ಚರ್ಚೆಯಲ್ಲಿ ಹೇಳಲಾಗಿದೆಯಂತೆ.
ಶಾಸಕರ ಬಹಿರಂಗ ಹೇಳಿಕೆಗಳ ಹಿನ್ನಲೆಯಲ್ಲಿ ಮುಂದಿನ ವಾರ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಬೆಂಗಳೂರಿಗೆ ಬರಲಿದ್ದಾರಂತೆ. ಪಕ್ಷದ ಪದಾಧಿಕಾರಿಗಳು, ಸಚಿವರು, ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸುವ ಮೂಲಕ, ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗೆ ಕಡಿವಾಣ ಹಾಕುತ್ತಾರಂತೆ. ಇದರ ಜೊತೆಗೆ ಎಂಎಲ್ಸಿಗಳ ಪಟ್ಟಿಯಲ್ಲಿ 4ರಲ್ಲಿ ಒಂದು ಹೆಸರನ್ನು ಕೈ ಬಿಡುವ ಬಗ್ಗೆ ಚರ್ಚೆ ನಡೆದಿದ್ದು, ರಮೇಶ ಬಾಬು ಅಥವ ದಿನೇಶ್ ಅಮ್ಮಿನಮಟ್ಟು ಇಬ್ಬರಲ್ಲಿ ಒಬ್ಬರ ಹೆಸರು ಕೈ ಬಿಟ್ಟು ಹೊಸ ಹೆಸರು ಸೇರ್ಪಡೆ ಮಾಡಿ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದೆ.