Ad imageAd image

ಮುಖ್ಯಮಂತ್ರಿ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್: ಗೃಹ ಸಚಿವ ಪರಮೇಶ್ವರ್

Nagesh Talawar
ಮುಖ್ಯಮಂತ್ರಿ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್: ಗೃಹ ಸಚಿವ ಪರಮೇಶ್ವರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಸಿದ್ದರಾಮಯ್ಯನವರ ಅಧಿಕಾರ ಅವಧಿ ಇಂತಿಷ್ಟೆಂದು ಹೈಕಮಾಂಡ್ ಹೇಳಿದೆಯೇ? ಹೈಕಮಾಂಡ್ ಯಾವ ಗೊಂದಲವನ್ನು ಸೃಷ್ಟಿಸಿಲ್ಲ. ಸಿದ್ದರಾಮಯ್ಯನವರೆ ಇನ್ನು ಎರಡು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಸಿದ್ದರಾಮಯ್ಯನವರೆ ಐದು ವರ್ಷ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಿಸಿರಲಿಲ್ಲ. ಆದರೂ ಅವರು ಅವಧಿ ಪೂರ್ಣಗೊಳಿಸಿದರು. 2023ರಲ್ಲಿ ಅವರೆ ಮುಖ್ಯಮಂತ್ರಿ ಎಂದು ಹೇಳಿತು. ನೀವೇ ಐದು ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ನೀಡುವ ಅಗತ್ಯವಿಲ್ಲ ಎಂದಿದ್ದಾರೆ.

WhatsApp Group Join Now
Telegram Group Join Now
Share This Article