ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಮೆಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲ ಮಾದರಿಯ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಸಿನಿಮಾಗಳಿಗೆ ಗರಿಷ್ಠ 200 ರೂಪಾಯಿಯ ಏಕರೂಪ ಟಿಕೆಟ್ ದರ ನಿಗದಿ ಮಾಡಿದೆ. ಕರ್ನಾಟಕ ಸಿನಿಮಾ, ನಿಯಂತ್ರಣ ಮತ್ತು ತಿದ್ದುಪಡಿ ನಿಯಮಗಳು-2025ರ ಅಡಿಯಲ್ಲಿ ಗರಿಷ್ಠ 200 ರೂಪಾಯಿ ನಿಗದಿ ಮಾಡಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಹೋಗಲಾಗಿದ್ದು, ಮಂಗಳವಾರ ಮಧ್ಯಂತರ ತಡೆ ನೀಡಿ ಆದೇಶಿಸಲಾಗಿದೆ.
ಹೊಂಬಾಳೆ ಫಿಲ್ಮ್ಸ್, ಮೆಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಪಿವಿಆರ್ ಐನಾಕ್ಸ್ ಲಿಮಿಟೆಡ್ ಷೇರುದಾರರು, ಕೀಸ್ಟೋನ್ ಎಂಟರ್ ಟೈನ್ಮೆಂಟ್ ಹಾಗೂ ವಿ.ಕೆ ಫಿಲ್ಮ್ಸ್ ಅರ್ಜಿ ಸಲ್ಲಿಸಿದ್ದು, ಮಂಗಳವಾರ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಂತರ ತಡೆ ನೀಡಿದೆ. 2017ರಲ್ಲಿ ಇದೇ ರೀತಿ ಸರ್ಕಾರ ಆದೇಶ ಮಾಡಿತ್ತು. ಅದನ್ನು ಹೈಕೋರ್ಟ್ ರದ್ದುಪಡಿಸಿದೆ ಎಂದು ವಾದಿಸಲಾಯಿತು.




