ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೈಕ್ ಟ್ಯಾಕ್ಸ್ ಸೇವೆ ನಿಲ್ಲಿಸಲು ಹೈಕೋರ್ಟ್ 6 ವಾರಗಳ ಗಡುವನ್ನು ಓಲಾ, ಉಬರ್, ರ್ಯಾಪಿಡೋಗಳಿಗೆ ನೀಡಿದೆ. 6 ವಾರಗಳ ಬಳಿಕ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಂತಿದೆ ಇಲ್ಲವೋ ಅನ್ನೋದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿ ನಿಯಮಗಳ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ತಿಳಿಸಿದ ಹೊರತು ಬೈಕ್ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಿಲ್ಲವೆಂದು ತಿಳಿಸಲಾಗಿದೆ.
ಮೋಟಾರು ಸೈಕಲ್ ಗಳನ್ನು ಸಾರಿಗೆ ವಾಹನವಾಗಿ ನೋಂದಾಯಿಸಲು 2022ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಬೇಕೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಎನ್ಐ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್, ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಇತರರು ಅರ್ಜಿಯನ್ನು ಸಲ್ಲಿಸಿದ್ದರು.