ಯಡಿಯೂರಪ್ಪ ಬಂಧನಕ್ಕೆ ಹೈಕೋರ್ಟ್ ತಡೆ

82

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪೋಕ್ಸೊ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ನ್ನು ಪೋಕ್ಸೊ ವಿಚಾರಣಾ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಬಂಧನ ಆದೇಶ ಪ್ರಶ್ನಿಸಿ ವಿಚಾರಣೆ ನಡೆಸಿದ ಪೀಠ, ಯಡಿಯೂರಪ್ಪ ಅವರನ್ನು ಮುಂದಿನ 2 ವಾರಗಳ ಕಾಲ ಒತ್ತಾಯದ ಕ್ರಮ ಬೇಡ. ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಪೊಲೀಸರಿಗೆ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಬಿಎಸ್ವೈ ಬಂಧನ ಭೀತಿಯಿಂದ ನಿರಾಳರಾಗಿದ್ದಾರೆ.

ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ನೋಟಿಸ್ ಗೆ ಅವರ ಉತ್ತರವನ್ನು ಗೌರವಿಸಿ ಎಂದು ಹೇಳಿದ ನ್ಯಾಯಮೂರ್ತಿ ಕೃಷ್ಣ.ಎಸ್ ದೀಕ್ಷಿತ್ ಪೀಠ 2 ವಾರಗಳ ಕಾಲ ಪ್ರಕರಣವನ್ನು ಮುಂದೂಡಿದ್ದಾರೆ.
error: Content is protected !!