ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಪ್ರೌಢಶಾಲೆಯ(8,9 ಹಾಗೂ 10ನೇ ತರಗತಿ) ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಮುಂದಿನ ಆದೇಶದವರೆಗೆ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಬೋರ್ಡ್ ಪರೀಕ್ಷೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದು, ರಾಜ್ಯ ಸರ್ಕಾರವನ್ನು ತರಾಟೆಗೆದುಕೊಂಡ ಸುಪ್ರೀಂ ಕೋರ್ಟ್, ಮುಂದಿನ ಆದೇಶದವರೆಗೂ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ಆದೇಶಿಸಿದೆ.
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಇದ್ದರೆ ಮೊದಲು ಉತ್ತಮವಾದ ಶಾಲೆಗಳನ್ನು ತೆರೆಯಿರಿ. ಆದರೆ, ಈ ರೀತಿಯ ವಿಧಾನ ಎಲ್ಲಿಯೂ ಅಳವಡಿಸಿಕೊಂಡಿಲ್ಲ. 8, 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಇದನ್ನು ಉಳಿದ ಜಿಲ್ಲೆಗಳ ಗಮನಕ್ಕೂ ತಂದಿರಲಿಲ್ಲ. ಇದರಲ್ಲಿ ಬರೋಬ್ಬರಿ 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.