Ad imageAd image

ವಿಜಯಪುರ: ಡಿ.7ರಂದು 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಹಾಗೂ ಪಿಂಚಣಿದಾರರ ಅಹವಾಲು ಆಲಿಕೆ ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡಲು

Nagesh Talawar
ವಿಜಯಪುರ: ಡಿ.7ರಂದು 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಹಾಗೂ ಪಿಂಚಣಿದಾರರ ಅಹವಾಲು ಆಲಿಕೆ ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡಲು 2024 ಡಿಸೆಂಬರ್ 7ರಂದು ಜಿಲ್ಲೆಯ 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ. ಡಿ.7ರಂದು ಬೆಳಿಗ್ಗೆ 11ಗಂಟೆಗೆ ತಾಳಿಕೋಟೆ ತಾಲೂಕಿನ ನೀರಲಗಿ ಗ್ರಾಮದ ಹೊಳೇ ಹುಚ್ಚೇಶ್ವರ ದೇವಸ್ಥಾನದಲ್ಲಿ ವಿಜಯಪುರ ಉಪವಿಭಾಗಾಧಿಕಾರಿಗಳು, ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇಂಡಿ ಉಪವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.

ವಿಜಯಪುರ ತಾಲೂಕಿನ ಜಂಬಗಿ ಗ್ರಾಮದ ಧ್ಯಾವತರಾಯ ಮುತ್ಯಾ ದೇವಸ್ಥಾನದಲ್ಲಿ ವಿಜಯಪುರ ಗ್ರೇಡ್-2 ತಹಶೀಲ್ದಾರ್, ಅಳಗಿನಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ತಿಕೋಟಾ ಗ್ರೇಡ್-2 ತಹಶೀಲ್ದಾರ್, ಕಾಖಂಡಕಿ ಗ್ರಾಮ ಪಂಚಾಯತಿಯಲ್ಲಿ ಬಬಲೇಶ್ವರ ಗ್ರೇಡ್-2 ತಹಶೀಲ್ದಾರ್, ರೆಬಿನಾಳ ಗ್ರಾಮದ ಶ್ರೀಹನುಮಾನ ದೇವಸ್ಥಾನದಲ್ಲಿ ಬಸವನಬಾಗೇವಾಡಿ ಗ್ರೇಡ್-2 ತಹಶೀಲ್ದಾರ್ ಅವರು ಹಾಗೂ ಶೀಕಳವಾಡಿಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಿಡಗುಂದಿ ಗ್ರೇಡ್-2 ತಹಶೀಲ್ದಾರ್ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.

ಕುರಬರದಿನ್ನಿ ಸಭಾ ಭವನದಲ್ಲಿ ಕೊಲ್ಹಾರ ತಹಶೀಲ್ದಾರರು, ನಾಗಬೇನಾಳ ತಾಂಡಾದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ್, ನಾದ ಬಿ.ಕೆ. ಗ್ರಾಮದ ಶ್ರೀ ಲಕ್ಷ್ಮಿ ದೇವಸ್ಥಾನದಲ್ಲಿ ಇಂಡಿ ಗ್ರೇಡ್-2 ತಹಶೀಲ್ದಾರ್, ಸಾತಲಗಾಂವ ಪಿ.ಬಿ.ಯ ಶ್ರೀ ಶಿವಯೋಗೇಶ್ವರ ದೇವಸ್ಥಾನದಲ್ಲಿ ಚಡಚಣ ಗ್ರೇಡ್-2 ತಹಶೀಲ್ದಾರ್, ಬೊಮ್ಮನಜೋಗಿ ಶ್ರೀ ಹನುಮಾನ ದೇವಸ್ಥಾನದಲ್ಲಿ ದೇವರಹಿಪ್ಪರಗಿ ಗ್ರೇಡ್-2 ತಹಶೀಲ್ದಾರ್ ಅವರು ಹಾಗೂ ಜಟ್ನಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಆಲಮೇಲ್ ತಹಶೀಲ್ದಾರ್ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.

ಪಿಂಚಣಿ ಅದಾಲತ್‌ನಲ್ಲಿ ಪರಿಗಣಿಸಬೇಕಾದ ಗ್ರಾಮಗಳ ಸಂಪೂರ್ಣ ಪಿಂಚಣಿದಾರರ ಮಾಹಿತಿಯೊಂದಿಗೆ  ಎಲ್ಲ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article