ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಮದ್ದೂರಿನಲ್ಲಿ ನಡೆದ ಕೋಮು ಗಲಭೆಗೆ ಸಂಬಂಧಿಸಿದಂತೆ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಈಗಾಗ್ಲೇ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಇಂದು ಶಾಂತಿ ಸಭೆ ಮಾಡುತ್ತಿದ್ದಾರೆ. ತಪ್ಪು ಮಾಡಿದವರು ಮುಸ್ಲಿಂರೆ ಆಗಿರಲಿ, ಹಿಂದೂಗಳೆ ಆಗಿರಲಿ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಇಡೀ ರಾಜ್ಯ ಶಾಂತಿಯುತವಾಗಿದೆ. ಒಂದು ಸಣ್ಣ ಊರಿನಲ್ಲಿ ಗಲಭೆ ಎಬ್ಬಿಸಿದವರನ್ನು ಸುಮ್ಮನೆ ಬಿಡುವುದಿಲ್ಲ. ಹೊರಗಿನಿಂದ ಕೆಲವರು ಬಂದು ಗಲಭೆಯಲ್ಲಿ ಭಾಗವಹಿಸಿದ್ದಾರೆ. ವಿಡಿಯೋ ಕ್ಯಾಪ್ಚರ್ ಮೂಲಕ ಗುರುತು ಪತ್ತೆ ಕಾರ್ಯ ನಡೆದಿದೆ. ಯಾರೇ ಇದ್ದರೂ ತಪ್ಪು ಮಾಡಿದವರನ್ನು ರಕ್ಷಿಸುವ ಪ್ರಶ್ನೆಯಿಲ್ಲ. ಪ್ರಚೋದನೆ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುತ್ತೆ ಅಂತಾ ಹೇಳಿದರು.