ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಅಲ್ಲದೆ ಅವರನ್ನು ಬಂಧಿಸಬೇಕು ಎಂದು ಹೇಳುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ.ಪರಮೇಶ್ವರ್, ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಸಹ ಇಲ್ಲ ಎಂದು ಅಧಿಕಾರಿಗಳೆ ಹೇಳಿದ್ದಾರೆ. ಸಚಿವರ ಮೇಲಿನ ಆರೋಪ ನಿರಾಧಾರ. ಇದರ ಸತ್ಯಾಸತ್ಯತೆ ಸಲುವಾಗಿ ಸಿಐಡಿಗೆ ವಹಿಸಲಾಗಿದೆ ಎಂದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಮಸಿ ಬಳಿಯುವ ಸಲುವಾಗಿ ಬಿಜೆಪಿಯವರು ಈ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನು ಸಿಬಿಐ ತನಿಖೆಗೆ ಕೊಡಲು ಆಗಲ್ಲ. ಸಿಐಡಿ ಸಮರ್ಥವಾಗಿ ಕೆಲಸ ಮಾಡುತ್ತೆ. ತನಿಖೆಯಿಂದ ಏನು ಅನ್ನೋದು ತಿಳಿಯಲಿದೆ. ಬಿಜೆಪಿ ಹೇಳಿದಂತೆ ಕೇಳಲು ಆಗುವುದಿಲ್ಲ ಎನ್ನುವ ಮೂಲಕ ವಿಪಕ್ಷಗಳಿಗೆ ತಿರುಗೇಟು ನೀಡುವ ಕೆಲಸ ಮಾಡಿದರು.