ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಡ್ರಗ್ಸ್ ದಂಧೆ ವ್ಯಾಪಕವಾಗಿ ಹರಡುತ್ತಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬಂದಿರುವ ಸಿನಿಮಾಗಳು ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಯಾವೆಲ್ಲ ಭಾಗದಲ್ಲಿ ಡ್ರಗ್ಸ್(Drugs) ದಂಧೆ ಜೋರಾಗಿದೆ ಎಂದು ತೋರಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈ ಪ್ರಕರಣಗಳ ಅಂಕಿ ಸಂಖ್ಯೆ ನೋಡಿದರೆ ಸಾಕಷ್ಟು ಕಡಿಮೆಯಾಗಿದೆ ಎನ್ನುವುದು ಗಮನಿಸಬಹುದು. ಆದರೆ, ಮೆಡಿಕಲ್ ಶಾಪ್ ಗಳಲ್ಲಿ ನೋವು ನಿವಾರಕ ಮಾತ್ರೆಗಳ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದರು.
ಗಾಂಜಾ ಸೇರಿದಂತೆ ಇತರೆ ಮಾದಕ( Narcotics) ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ನೋವು ನಿವಾರಕ ಮಾತ್ರೆಗಳು ಬೇರೆ ಬೇರೆ ಕಂಪನಿಗಳು ತಯಾರಿಸುವುದರಿಂದ ಜನರ ಕೈಗೆ ಸುಲಭವಾಗಿ ಸಿಗುತ್ತಿವೆ. ಇದನ್ನು ಯಾವ ರೀತಿ ನಿಯಂತ್ರಿಸಬೇಕು ಎನ್ನುವುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ ಅಂತಾ ಹೇಳಿದರು.