ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್ ರಾಜಣ್ಣ ಸದನ ಹಾಗೂ ಸದನದ ಹೊರಗೆ ನೀಡಿರುವ ಹೇಳಿಕೆ ದೊಡ್ಡ ಸಂಚಲನ ಮೂಡಿಸಿದೆ. ಈ ಬಗ್ಗೆ ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಬೆಂಗಳೂರಿನ ಮನೆಯಲ್ಲಿ ಸಿಸಿಟಿವಿ ಇಲ್ಲ ಎಂದು ಹೇಳಿದ್ದಾರೆ.
ಎರಡು ಬಾರಿ ಮನೆಗೆ ಬರಲಾಗಿದೆ. ಇಬ್ಬರು ಬೇರೆ ಬೇರೆ ಹುಡುಗಿಯರು ಇದ್ದರು. ಹೈಕೋರ್ಟ್ ವಕೀಲೆ ಎಂದು ಹೇಳಿದ್ದು, ನಿಮ್ಮ ಜೊತೆಗೆ ಪರ್ಸನಲ್ ಆಗಿ ಮಾತನಾಡಬೇಕು ಎಂದಿದ್ದರು. ಜೀನ್ಸ್ ಪ್ಯಾಂಟ್, ಬ್ಲೂ ಟಾಪ್ ಹಾಕಿಕೊಂಡಿದ್ದರು. ಫೋಟೋ ತೋರಿಸಿದರೆ ಗುರುತು ಹಿಡಿಯುತ್ತೇನೆ. ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ನಾನು ಹೇಳಿಲ್ಲ. ಈ ಕುರಿತು ಮೂರು ಪುಟಗಳ ದೂರು ಬರೆದಿದ್ದು, ಗೃಹ ಸಚಿವ ಪರಮೇಶ್ವರನ್ನು ಭೇಟಿಯಾಗಿ ದೂರು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.