ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕರ್ನಾಟಕದಲ್ಲಿ ಸಚಿವರು, ಶಾಸಕರು ಸೇರಿದಂತೆ 48 ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ನಡೆಸಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ತಿರಸ್ಕರಿಸಲಾಗಿದೆ. ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ, ವಿಕ್ರಮ್ ನಾಥ್ ಹಾಗೂ ಸಂಜಯ್ ಕರೊಲ್ ಅವರಿದ್ದ ಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದೆ.
ಸಾಮಾಜಿಕ ಕಾರ್ಯಕರ್ತ ಬಿನಯ್ ಕುಮಾರ್ ಸಿಂಗ್ ಎಂಬಾತ, ಸುಪ್ರೀಂ ಕೋರ್ಟ್ ನಿವೃತ್ತಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದ. ಮಾಧ್ಯಮಗಳಲ್ಲಿ ಈ ಬಗ್ಗೆ ಆರೋಪಗಳು ಕೇಳಿ ಬಂದಿವೆ. ಘಟನೆ ಹಿಂದಿರುವ ಉದ್ದೇಶ ತನಿಖೆ ನಡೆಸಬೇಕೆಂದು ಅರ್ಜಿದಾರ ಪರ ವಕೀಲರು ವಾದ ಮಂಡಿಸಿದರು. ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ವ್ಯಕ್ತಿಯೊಬ್ಬರು ಇದನ್ನು ಮಾಡಿಸಿದ್ದಾರೆ ಎಂದು ಹೇಳಿದರು. ಆದರೆ, ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.