ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾಪುರ ಬಡಾವಣೆಯ ಹತ್ತಿರ ನಡೆದಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ರೇವಣಸಿದ್ದಪ್ಪ ಪಾಳೆಕರ್(33) ಕೊಲೆಯಾದ ಯುವಕನಾಗಿದ್ದಾನೆ. ಸ್ನೇಹಿಕತರೆ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ನೇಹಿತರೊಂದಿಗೆ ಸಿಗರೇಟ್ ಸೇದಲು ಹೊರಗೆ ಹೋಗಿದ್ದಾಗ ಗಲಾಟೆಯಾಗಿದೆ. ಈ ವೇಳೆ ಕೊಲೆ ಮಾಡಿ ಪರಾರಿಯಾಗಿರುವ ಅನುಮಾನ ಮೂಡಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿದ್ದು ಯಾರು? ಯಾವ ಕಾರಣಕ್ಕೆ ಅನ್ನೋ ತನಿಖೆ ನಡೆಯುತ್ತಿದೆ.