ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೆಳಗಾವಿಯಲ್ಲಿ ಎಂಇಎಸ್ ಪುಂಡರ ದಬ್ಬಾಳಿಕೆ ಖಂಡಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ಬೆಂಗಳೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಷ್ಟೊಂದು ಉತ್ತಮ ರೀತಿಯ ಬೆಂಬಲ ವ್ಯಕ್ತವಾಗಿಲ್ಲವೆಂದು ತಿಳಿದು ಬಂದಿದೆ. ಸ್ವಲ್ಪ ಸಮಯ ಕಳೆದಂತೆ ಯಾವ ರೀತಿ ವಾತಾವರಣ ಇರುತ್ತೆ ನೋಡಬೇಕು. ಬೆಳಗಾವಿಗೆ ತೆರಳುವ ಕೆಎಸ್ಆರ್ ಟಿಸಿ ಬಸ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್ ಮಾಡಲಾಗಿದೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ವಿಜಯನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಜನಜೀವನ ಶುರುವಾಗಿದೆ. ಇನ್ನು ಬಸ್ ಸಂಚಾರ ತಡೆಯಲು ಯತ್ನಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಂದ್ ಗೆ ಕೆಎಸ್ಆರ್ ಟಿಸಿ, ಮೆಟ್ರೋ ಬೆಂಬಲ ನೀಡಿಲ್ಲ. ಹೋಟೆಲ್ ಮಾಲೀಕರ ಸಂಘದಿಂದ ನೈತಿಕ ಬೆಂಬಲ ಮಾತ್ರ ಸಿಕ್ಕಿದೆ. ಆಟೋ, ಓಲಾ, ಉಬರ್ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್ ವತಿಯಿಂದ ಬೆಂಬಲ ನೀಡಲಾಗಿದೆ.