Ad imageAd image

ಖಾಕಿ ಕೈಗೆ ಕಳ್ಳ ಸಿಕ್ಕಿಬಿದ್ದಿದ್ದು ಹೇಗೆ..?

Nagesh Talawar
ಖಾಕಿ ಕೈಗೆ ಕಳ್ಳ ಸಿಕ್ಕಿಬಿದ್ದಿದ್ದು ಹೇಗೆ..?
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಕಳ್ಳತನ ಕೃತ್ಯವೆಸಗಿದವನನ್ನು ಬಂಧಿಸಲಾಗಿದೆ. ನಿಂಗಪ್ಪ ರಾಜಪ್ಪ ಬಡಿಗೇರ ಬಂಧಿತ ಆರೋಪಿಯಾಗಿದ್ದಾನೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜನಕೋಳೂರು ಮೂಲದವನೆಂದು ತಿಳಿದು ಬಂದಿದೆ. ಈತ ಆಗಾಗ ಸಿಂದಗಿಗೆ ಬಂದು ಕಳ್ಳತನ ನಡೆಸಿರುವ ಕುರಿತು ಬಾಯಿ ಬಿಟ್ಟಿದ್ದಾನಂತೆ.

ಬುಧವಾರ ಪಟ್ಟಣದಲ್ಲಿ ಸಂಶಯ ಬರುವ ರೀತಿಯಲ್ಲಿ ತಿರುಗಾಡುತ್ತಿದ್ದನು. ಆಗ ಈತನನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ಪಟ್ಟಣದ ಕಲ್ಯಾಣ ನಗರ, ಮಲ್ಲಿಕಾರ್ಜುನ ನಗರ ಹಾಗೂ ಕೊಕಟನೂರು, ಸುಂಗಠಾಣ ಗ್ರಾಮಗಳಲ್ಲಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿತನಿಂದ ಒಂದು ಬೈಕ್, 105 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸಿಪಿಐ ನಾನಾಗೌಡ ಪೊಲೀಸಪಾಟೀಲ, ಪಿಎಸ್ಐ ಆರೀಫ್ ಮುಶಾಪುರಿ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article