ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಇಲ್ಲಿನ ಮಂಟೂರ ರಸ್ತೆಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ ಪ್ರಯುಕ್ತ ಅಳವಡಿಸಿದ್ದ ಬೃಹತ್ ಕಟೌಟ್ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಗಾಯಾಳುಗಳನ್ನು ಕೆಎಂಸಿ-ಆರ್ ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ.
ಕೊಳಗೇರಿ ಮಂಡಳಿಯಿಂದ ಮನೆ ಹಂಚಿಕೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಗಳನ್ನು ನಿಲ್ಲಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಕಟೌಟ್ ಬಿದ್ದು, ಮೂವರು ಗಾಯಗೊಂಡಿದ್ದಾರೆ.




