ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಇಂದು(ಗುರುವಾರ) ಬಂದ್ ಗೆ ಕರೆ ಕೊಡಲಾಗಿದೆ. ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಬಂದ್ ಗೆ ಕರೆ ಕೊಟ್ಟಿದ್ದು, ಬಹುತೇಕ ವ್ಯಾಪಾರ ವಹಿವಾಟು ಸ್ತಬ್ಧವಾಗಿದೆ. ತುರ್ತು ಸೇವೆಗಳಾದ ಔಷಧಿ ಅಂಗಡಿ, ಹಾಲು, ಆಂಬ್ಯುಲೆನ್ಸ್ ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.
ಸಚಿವ ಸಂಪುಟದಿಂದ ಅಮಿತ್ ಶಾ ಅವರನ್ನು ಕೈ ಬಿಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಚನ್ನಮ್ಮ ವೃತ್ತ ಸೇರಿದಂತೆ ವಿವಿಧ ಕಡೆ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ನಿಂತುಕೊಂಡು ವಾಹನಗಳು ಸಂಚರಿಸದಂತೆ ನೋಡಿಕೊಳ್ಳುತ್ತಿದ್ದಾರೆ. ಹೀಗಾಗಿ ಬಹುತೇಕ ವಾಹನಗಳು ರಸ್ತೆಗೆ ಇಳಿದಿಲ್ಲ. ಹೋಟೆಲ್ ಸೇರಿ ಎಲ್ಲ ಅಂಗಡಿಗಳು ಮುಚ್ಚಿವೆ. ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ.