ಪ್ರಜಾಸ್ತ್ರ ಸುದ್ದಿ
ನಂಜನಗೂಡು(Najanagudu): ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(HDK) ಭಾನುವಾರ ಮುಂಜಾನೆ ನಂನಗೂಡಿನ ಶ್ರೀಕಂಠೇಶ್ವರ ದರ್ಶನ ಪಡೆದು ನಂತರ ಅತಿಥಿ ಗೃಹದಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಬಂದಾಗ, ರೂಮಿಗೆ ಬೀಗ ಹಾಕಿದ್ದು ಕಂಡು ಬಂದಿದೆ. ಉದ್ದೇಶಪೂರ್ವಕವಾಗಿ ಅವರಿಗೆ ಅವಮಾನ ಮಾಡಲು ಹೀಗೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಲೋಕೋಪಯೋಗಿ ಇಲಾಖೆಯ ಅತಿಥಿ(Guest house) ಗೃಹಕ್ಕೆ ಕುಮಾರಸ್ವಾಮಿ ಹೋಗಿದ್ದಾರೆ. ಅಲ್ಲಿ ಬೀಗ ಹಾಕಲಾಗಿದೆ. ಅಲ್ಲಿನ ಸಿಬ್ಬಂದಿಯನ್ನು ಕೇಳಿದರೆ ಅಧಿಕಾರಿಗಳು ಬೀಗ ಹಾಕಿಕೊಂಡು ಹೋಗಿದ್ದಾರೆ ಅಂತಾ ಹೇಳಿದ್ದಾರೆ. ಹೀಗಾಗಿ ಸುಮಾರು 15 ನಿಮಿಷಗಳ ಕಾಲ ಕಾಯಿದಿದ್ದಾರೆ. ಯಾರೂ ಬರದೆ ಇದ್ದಾಗ ಮೈಸೂರಿಗೆ ತೆರಳಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಸಾ.ರಾ ಮಹೇಶ್ ಹಾಗೂ ಜೆಡಿಎಸ್(JDS) ನಾಯಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು ಬರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಆದರೆ, ಅಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಈ ರೀತಿ ನಡೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.