ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಪತ್ನಿಯ ಮೇಲಿನ ಅನುಮಾನಕ್ಕೆ ಹತ್ಯಗೈದ ಪತಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಹೆಗ್ಗಡೆ ನಗರದಲ್ಲಿ ನಡೆದಿದೆ. ಮೇಲಾರಮಣಿ(35) ಕೊಲೆಯಾದ ಮಹಿಳೆ. ಚಂದ್ರಶೇಖರ್ ಕೊಲೆ ಆರೋಪಿ ಪತಿಯಾಗಿದ್ದಾನೆ. ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ನಂತರ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಮೇಲಾರಮಣಿ ಹಾಗೂ ಚಂದ್ರಶೇಖರ್ ನಡುವೆ 11 ವರ್ಷಗಳ ಹಿಂದೆ ಮದುವೆಯಾಗಿದೆ. ಮೇಲಾರಮಣಿ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಚಂದ್ರಶೇಖರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಸದಾ ಫೋನ್ ನಲ್ಲಿ ಮಾತನಾಡುತ್ತಿರುತ್ತಾಳೆ. ಆಕೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಅನ್ನೋ ಅನುಮಾನ ಮೂಡಿದೆ. ಹೀಗಾಗಿ ಜಗಳವಾಡಿದ್ದಾನೆ. ಜಗಳ ಅತಿರೇಕಕ್ಕೆ ಹೋದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.