ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್(shalini rajnesh) ಅವರ ನೇಮಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಮೂಲಕ ಪತಿ ರಜನೀಶ್ ಗೊಯಲ್(rajnesh goel)ನಿವೃತ್ತಿ ಬಳಿಕ ಅದೇ ಹುದ್ದೆಗೆ ಪತ್ನಿ ಶಾಲಿನಿ ಅವರು ಬಂದಿದ್ದಾರೆ. ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಈಗಿರುವ ಮುಖ್ಯ ಕಾರ್ಯದರ್ಶಿ(Chief Secretary) ರಜನೀಶ್ ಗೊಯಲ್ ಅವರು ಐದು ದಿನಗಳಲ್ಲಿ ನಿವೃತ್ತಿಯಾಗುತ್ತಾರೆ. ಈ ಸ್ಥಾನಕ್ಕೆ ಇವರ ಪತ್ನಿ, ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ಅವರು ಬರಲಿದ್ದಾರೆ. 1989ನೇ ಸಾಲಿನ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು 2027 ಜೂನ್ ಅಂತ್ಯಕ್ಕೆ ನಿವೃತ್ತಿಯಾಗಲಿದ್ದಾರೆ.