ಪ್ರಜಾಸ್ತ್ರ ಸುದ್ದಿ
ಹಾಸನ(Hasana): ಪತ್ನಿಗೆ ಮಾತ್ರೆ ನುಂಗಿಸಿ, ಸೀಮೆ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ನಡೆದಿದೆ. ಸುಶ್ಮಿತಾ ಅನ್ನೋ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪತಿ ಶ್ರೀಮಂತ ಪರಾರಿಯಾಗಿದ್ದಾನೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024 ಡಿಸೆಂಬರ್ ನಲ್ಲಿ ಶ್ರೀಮಂತ ಹಾಗೂ ಸುಶ್ಮಿತಾ ಮದುವೆಯಾಗಿದೆ. ಇದಾದ ಒಂದು ತಿಂಗಳಲ್ಲೇ ವರದಕ್ಷಿಣೆ ಕಿರುಕುಳ ನೀಡಲು ಶುರು ಮಾಡಿದ್ದನಂತೆ. ಕುಡಿತದ ಚಟ ಇರುವುದಿಂದ ನಿತ್ಯ ಗಲಾಟೆ ಮಾಡುತ್ತಿದ್ದನಂತೆ. ಕಳೆದ ಜುಲೈ 30ರ ರಾತ್ರಿ ಕುಡಿದು ಬಂದು ಗಲಾಟೆ ಮಾಡಿದ್ದಾನೆ. ಪತ್ನಿಗೆ ಮಾತ್ರೆ ನುಂಗಿಸಿ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸಧ್ಯ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿ ಪತಿ ಶ್ರೀಮಂತ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.