ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಮಾತುಗಳಿಗೆ ಹೆದರುವ ಮಗ ನಾನಲ್ಲ. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಅವರ ಹೆಸರಲ್ಲಿರುವ ಭೂಮಿ ಬಹಿರಂಗ ಪಡಿಸಲಿ. ನನ್ನ ಹೆಸರಲ್ಲಿ, ನನ್ನ ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ ಇದೆ ಎಂದು ನಾನು ಬಹಿರಂಗ ಪಡಿಸುತ್ತೇನೆ ಎಂದು ಸವಾಲ್ ಹಾಕಿದರು.
ನಾನು ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದರೆ ಯಾವುದೇ ಶಿಕ್ಷೆ ಕೊಟ್ಟರೂ ಅನುಭವಿಸಲು ಸಿದ್ಧ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಹೆಚ್ಡಿಕೆ ಹಾಗೂ ಡಿಸಿಎಂ ಡಿಕೆಶಿ ನಡುವೆ ಭೂಮಿ ಒತ್ತುವರಿ ಆರೋಪಗಳ ಸಮರ ನಡೆದಿದೆ. ವಿಧಾನಸಭೆ, ಲೋಕಸಭೆ ಚುನಾವಣೆಯಿಂದಲೂ ಈ ಇಬ್ಬರು ನಾಯಕರ ನಡುವಿನ ಆರೋಪ, ಪ್ರತ್ಯಾರೋಪ ಮುಂದುವರೆದಿದೆ.