ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಬದಲಾವಣೆ ವಿಚಾರ, ಗುಂಪುಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಹೇಳಿಕೆಗಳು ಬರುತ್ತಿವೆ. ಈ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಾನು ಯಾವುದೇ ಬಣದ ನಾಯನಕಲ್ಲ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ. ನಾನು 140 ಶಾಸಕರ ಅಧ್ಯಕ್ಷ. ಮಾನ್ಯ ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಅವರಿಗೆ ಶುಭ ಕೋರುತ್ತೇನೆ ಎಂದಿದ್ದಾರೆ.
ಸದಾಶಿವನಗರದಲ್ಲಿರುವ ನಿವಾಸದ ಹತ್ತಿರ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಗುಂಪನ್ನು ದೆಹಲಿಗೆ ಕರೆದುಕೊಂಡು ಹೋಗುವ ಇಚ್ಛೆ ನನಗಿಲ್ಲ. ಸಂಪುಟ ಪುನರ್ ರಚನೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ಹೋಗಿರುವುದು ಸಹಜ. ಅವರಿಗೆ ಹಕ್ಕಿದೆ ಎಂದು ಹೇಳಿದ್ದಾರೆ.




